2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ : ಕೊಪ್ಪಳ ಜಿಲ್ಲೆಯ ಒಬ್ಬರು ಆಯ್ಕೆ.!!

2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ : ಕೊಪ್ಪಳ ಜಿಲ್ಲೆಯ ಒಬ್ಬರು ಆಯ್ಕೆ.!!

2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು ಅದರಲ್ಲಿ ಕೊಪ್ಪಳ ಜಿಲ್ಲೆಯ ಒಬ್ಬರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಕುಷ್ಟಗಿ ತಾಲೂಕು ಕ್ಯಾದಗುಪ್ಪಿಯ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಬಸಪ್ಪ ವಾಲಿಕಾರ ಅವರಿಗೆ ಪ್ರೌಢ ಶಾಲೆ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಸಿಕ್ಕಿದೆ.

ಕರ್ನಾಟಕ ಶಿಕ್ಷಣ ಇಲಾಖೆ 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕೊಪ್ಪಳ ಜಿಲ್ಲೆಯಿಂದ ಕುಷ್ಟಗಿ ತಾಲೂಕಿನ ಕ್ಯಾದಗುಪ್ಪಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರು ಬಸಪ್ಪ ವಾಲಿಕಾರ ಅವರ ಹೆಸರಿದ್ದು ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Leave a Reply

error: Content is protected !!