ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ಬಳಿಕ, ಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಬದಲಾವಣೆಗೆ ಹಾಗೂ ಕುಟುಂಬಸ್ಥರ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಇದೀಗ ಸೆಪ್ಟೆಂಬರ್ 10ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಸೆಪ್ಟೆಂಬರ್14ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದು ಬಂದಿದೆ.
BIG BREAKING : ಜಿಲ್ಲಾ ಮಟ್ಟದ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಭಾಜನರಾದ ಮಹಿಳಾ ಶಿಕ್ಷಕಿಯರು..!!
SPECIAL DAY : ಸಮಸ್ತ ಗುರುವೃಂದಕ್ಕೆ “ಶಿಕ್ಷಕರ ದಿನಾಚರಣೆ”ಯ ಹಾರ್ದಿಕ ಶುಭಾಶಯಗಳು
![](https://prajavikshane.com/wp-content/uploads/2023/09/Copy-of-Brown-Orange-Modern-Team-Organization-Structure-Graph-3.jpg)
ಈ ಕುರಿತು ಆಹಾರ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಪಡಿತರ ಚೀಟಿದಾರರ ಅನುಕೂಲಕ್ಕಾಗಿ, ಸರ್ವರ್ ಸಮಸ್ಯೆಯಿಂದಾಗಿ ರೇಷನ್ ಕಾರ್ಡ್ ನಲ್ಲಿನ ಹೆಸರು ಸೇರ್ಪಡೆ, ತಿದ್ದುಪಡಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಜನರು ಕಾಲಾವಕಾಶ ವಿಸ್ತರಣೆ ಕೋರಿದ್ದರು. ಈ ಹಿನ್ನಲೆ ಸೆಪ್ಟೆಂಬರ್ 14ರವರೆಗೆ ಕಾಲಾವಕಾಶ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದೇ ಸೆಪ್ಟೆಂಬರ್ 6ರ ಅಂದರೆ ನಾಳೆಯಿಂದ ಸೆಪ್ಟೆಂಬರ್ 8ರವರೆಗೆ ಚಿತ್ರದುರ್ಗ, ಕೋಲಾರ, ದಾವಣೆಗೆರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ, ತುಮಕೂರು, ಯಾದಗಿರಿ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಯ ಪಡಿತರ ಚೀಟಿ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.
CRICKET NEWS : ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ..!!
ಇನ್ನೂ ಸೆಪ್ಟೆಂಬರ್ 9ರಿಂದ ಸೆಪ್ಟೆಂಬರ್ 11ರವರೆಗೆ ಕೇವಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿನ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 12ರಿಂದ ಸೆಪ್ಟೆಂಬರ್ 14ರವರೆಗೆ ಬೆಳಗಾವಿ, ಹಾವೇರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಮಂಡ್ಯ, ಉತ್ತರ ಕನ್ನಡ, ವಿಜಯಪುರ, ಮೈಸೂರು, ಕೊಡಗು, ಹಾವೇರಿ ಹಾಗೂ ಹಾಸನ ಜಿಲ್ಲೆಯ ಪಡಿತರ ಫಲಾನುಭವಿಗಳು, ತಮ್ಮ ಕಾರ್ಡ್ ನಲ್ಲಿ ತಪ್ಪುಗಳನ್ನು ಸರಿ ಪಡಿಸಿಕೊಳ್ಳೋದಕ್ಕೆ, ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.