ಕುಕನೂರು-ಯಲಬುರ್ಗಾ : ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಹಾಗೂ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು (ಸೆ. 8ರಂದು) ಇಡೀ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
LOCAL EXPRESS : ಶಾಂತಿ ಎಲ್ಲಿರುತ್ತೋ ಅಲ್ಲಿ ಸಮೃದ್ಧಿ : ಡಿ.ವೈ.ಎಸ್.ಪಿ ಶರಣಬಸಪ್ಪ ಸುಭೆದಾರ್
JOB, walk-in interview : ಸೆ.08ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ..!!
ಇಂದು 10 ಗಂಟೆಗೆ ಯಲಬುರ್ಗಾ ಪಟ್ಟಣದ ಭಾರತೀಯ ಜನತಾ ಪಾರ್ಟಿಯ ಕಚೇರಿಯಿಂದ ಮುಖ್ಯ ರಸ್ತೆಯ ಮೂಲಕ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಛೇರಿಗೆ ತಲುಪಿ ಈ ವೇಳೆ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಗುತ್ತದೆ. ರಾಜ್ಯದಲ್ಲಿ ಮಳೆ ಇಲ್ಲದೆ ಬರ ಆವರಿಸಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸರಕಾರ ಸ್ಪಂದಿಸುತ್ತಿಲ್ಲ. ನಮ್ಮ ಅವಳಿ ತಾಲೂಕು ಸೇರಿದಂತೆ 198ಕ್ಕಿಂತ ಹೆಚ್ಚು ತಾಲ್ಲೂಕುಗಳಲ್ಲಿ ಬರದ ದುಸ್ಥಿತಿ ಇದೆ. ಆದರೆ, ಬರಪೀಡಿತ ತಾಲ್ಲೂಕುಗಳನ್ನು ರಾಜ್ಯ ಸರಕಾರ ಇನ್ನೂ ಘೋಷಿಸಿಲ್ಲ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಹಾಲಪ್ಪ ಆಚಾರ್ ಟೀಕಿಸಿದ್ದಾರೆ.