ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಆಗಸ್ಟ್ 01ರಿಂದ ಆ. 31ರ ವರೆಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದ್ದು, ಈ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
KOPPAL NEWS : ಬೆಳೆ ಸ್ಪರ್ಧೆಗೆ ನೋಂದಾಯಿಸಲು ಸೆಪ್ಟೆಂಬರ್ 15ರವರೆಗ ಅವಕಾಶ
ಅರ್ಹ ವಿಕಲಚೇತನರು ಸುವಿಧಾ ವೆಬ್‌ಸೈಟ್ URL:https://suvidha.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32, ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ, ಕೊಪ್ಪಳ, ಇಲ್ಲಿಗೆ ಸಲ್ಲಿಸಬೇಕು.
BREAKING : ಇಂದು ಮಾಜಿ ಸಚಿವ ಹಾಲಪ್ಪ ಆಚಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ತಾಲೂಕಿನ ಎಂ.ಆರ್.ಡಬ್ಲ್ಯೂಗಳು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ., ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08539-200460 ಗೆ ಸಂಪರ್ಕಿ¸ಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.