ಧಾರವಾಡ : ರಾಜ್ಯ ಸರಕಾರವು ಈ ವರ್ಷದಿಂದ ರೈತರಿಗೆ 5 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿ ಸಾಲ ಮತ್ತು 15 ಲಕ್ಷ ರೂಪಾಯಿವರೆಗೆ ಕೇವಲ ಶೇ. 3 ರಷ್ಟು ಬಡ್ಡಿ ನಿಗದಿಗೊಳಿಸಿ, ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ನಿನ್ನೆ (ಶನಿವಾರ) ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಏರ್ಪಡಿಸಲಾಗಿದ್ದ “ಕೃಷಿಮೇಳ- 2023” ಉದ್ಘಾಟಿಸಿ, ಮಾತನಾಡಿದ ಸಿಎಂ, ‘ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದು, ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ’ ಎಂದು ಅಭಿಪ್ರಾಯ ಪಟ್ಟರು.