ಬೆಂಗಳೂರು : ರಾಜ್ಯದಲ್ಲಿ ಮಳೆಯ ಕೊರತೆಯಿಂದ ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ವಿಪತ್ತು ನಿರ್ವಹಣೆ ಬಗ್ಗೆ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
LOCAL EXPRESS : ಕತ್ತಲೆಯಲ್ಲಿ ಬೇವೂರು ಪ್ರಾಥಮಿಕ ಆರೋಗ್ಯ ಕೇಂದ್ರ..!!
ನಿನ್ನೆ (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಯ ಬಳಿಕ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ರಾಜ್ಯದ 31 ಜಿಲ್ಲೆಗಳಲ್ಲಿ ಒಟ್ಟು 236 ತಾಲ್ಲೂಕುಗಳಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 161 ತಾಲೂಕುಗಳು ತೀವ್ರ ಬರಪೀಡಿತವಾಗಿದ್ದು, 34 ತಾಲೂಕುಗಳು ಸಾಧಾರಣ ಬರಪೀಡಿತವಾಗಿವೆ. ಹೀಗಾಗಿ ಒಟ್ಟು 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ’ ಎಂದು ಉಪಸಮಿತಿಯ ಅಧ್ಯಕ್ಷ ಕೃಷ್ಣಭೈರೇಗೌಡ ಹೇಳಿದ್ದಾರೆ.