ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ 2 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 500 ರಿಂದ 600 ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶ ವಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ತಿಳಿಸಿದರು.
BIG NEWS : ರಾಜ್ಯದರ 195 ತಾಲೂಕುಗಳನ್ನು ‘ಬರಪೀಡಿತ’ ಎಂದು ಘೋಷಣೆ..!!
ಕಾರ್ಯಕ್ರವೊಂದರಲ್ಲಿ ಮಾತನಾಡಿದ ಅವರು, ‘ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ’ ಎಂದರು.
LOCAL EXPRESS : ಕತ್ತಲೆಯಲ್ಲಿ ಬೇವೂರು ಪ್ರಾಥಮಿಕ ಆರೋಗ್ಯ ಕೇಂದ್ರ..!!
ಈ ಶಾಲೆಗಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸಕ್ತ ಮಕ್ಕಳನ್ನು ದಾಖಲು ಮಾಡಿಕೊಂಡು ತರಗತಿಗಳಿಗೆ ಕರೆತರುವ ಹಾಗೂ ತರಗತಿ ಮುಗಿದ ನಂತರ ಬಿಟ್ಟು ಬರಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಸ್ಥಳೀಯರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.