ಕೊಪ್ಪಳ : ಜಿಲ್ಲಾಡಳಿತದಿಂದ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 17ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
LOCAL NEWS : ಪ್ರತಿಭಾ ಕಾರಂಜಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಸಹಕಾರಿಯಾಗಿವೆ : ಭೂತೆ!
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
KOPPAL NEWS : ನಾಳೆ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಉಪಸ್ಥಿತರಿರುವರು.
ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣದ ಬಳಿಕ ಪಥಸಂಚಲನ, ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.