ಕೊಲಂಬೊ : ಇಂದು ಭಾರತ ಮತ್ತು ಶ್ರೀಲಂಕಾ ನಡೆದ ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ದಾಳಿಗೆ ತತ್ತರಿಸಿದ ಶ್ರೀಲಂಕಾದ ಬ್ಯಾಟ್ಸ್ಮ್ಯಾನ್ ಗಳು ಪೆವಿಲಿಯನಿಗೆ ಪರೇಡ್ ನಡೆಸಿದರು.
ಈ ಪರಿಣಾಮ ಇಂದು ಶ್ರೀಲಂಕಾ ವಿರುದ್ಧ ವಿಕೆಟ್ ನಷ್ಟವಿಲ್ಲದೆ ಟೀಮ್ ಇಂಡಿಯಾ ಗೆದ್ದು ಬೀಗಿದೆ.
ಈ ಮೂಲಕ ಭಾರತವು 8ನೇ ಬಾರಿಗೆ ಏಷ್ಯಾ ಕಪ್ ಗೆದ್ದು ಬಿಗಿದೆ. ಭಾರತದ ಪರ ಔಟ್ ಆಗದೆ ಈಶಾನ್ ಕಿಶನ್ 23 ಹಾಗೂ ಶುಭಮನ್ ಗಿಲ್ 27 ರನ್ ಕಲೆ ಹಾಕಿ ಗೆಲುವಿನ ದಡ ಮುಟ್ಟಿಸಿದರು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಟೀಮ್ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿತು. ಮೊದಲ ಓವರ್ನಲ್ಲೇ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಸಿರಾಜ್ ಬರೋಬ್ಬರಿ 6 ವಿಕೆಟ್, ಹಾರ್ಧಿಕ್ ಪಾಂಡ್ಯ 3 ವಿಕೆಟ್, ಜಸ್ಪ್ರೀತ್ ಬುಮ್ರಾ 1 ವಿಕೆಟ್ ಪಡೆದರು.