ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಕೆಲವೆಡೆ ತೀವ್ರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಇಲಾಖೆ ಮಾಹಿತಿ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ.
KOPPAL NEWS : ಫ್ರೀ ಟಿಕೆಟ್ ಎಫೆಕ್ಟ್, ಬಸ್ ಗಳಿಗಾಗಿ ವಿದ್ಯಾರ್ಥಿಗಳ ಪರದಾಟ
ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ ಎಂದು ತಿಳಿಸಿದೆ.
LOCAL EXPRESS : ‘ಆಪರೇಷನ್ ಪೋಲೋ’ಯಿಂದ ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ್ಯ : ತಹಶೀಲ್ದಾರ್ ಎಚ್ ಪ್ರಾಣೇಶ್
ಕರಾವಳಿಯ ಬಹುತೇಕ ಕಡೆಯಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಇಂದು (ಮಂಗಳವಾರ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ. ಬಿರುಗಾಳಿಯು ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.