BIG NEWS : ನಾಳೆ ಮದ್ಯ ಮಾರಾಟ ನಿಷೇಧ..!!

You are currently viewing BIG NEWS : ನಾಳೆ ಮದ್ಯ ಮಾರಾಟ ನಿಷೇಧ..!!

ಕೊಪ್ಪಳ : ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

LOCAL NEWS : ಇಟಗಿ ಆದರ್ಶ ವಿದ್ಯಾಲಯದ ಮಕ್ಕಳು ಯೋಗ ಹಾಗೂ ಚದುರಂಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ..! 

ಜಿಲ್ಲೆಯಾದ್ಯಾಂತ ಆಚರಿಸಲಾಗುವ ಗೌರಿ-ಗಣೇಶ ಹಬ್ಬದ ಅಂಗವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ ಹಾಗೂ ಗೌರಿ ಗಣೇಶ ಮೂರ್ತಿಗಳನ್ನು 1, 2, 3, 5, 7, 9, 11ನೇ ದಿನಗಳಂದು ಮೂರ್ತಿಗಳನ್ನು ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ ಮಾಡುವರು. ಹಬ್ಬದ ಆಚರಣೆ ಸಮಯದಲ್ಲಿ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕೆಲವು ದುಷ್ಟ ಶಕ್ತಿಗಳು ಕೋಮು ಸಾಮರಸ್ಯಕ್ಕೆ ಧಕ್ಕೆಯನ್ನುಂಟು ಮಾಡುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಹಬ್ಬದ ಆಚರಣೆ ಸಮಯದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗೆ ಸೆ. 20, 21 ಮತ್ತು 23ರಂದು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ಆಧೀಕ್ಷಕರು, ಕೊಪ್ಪಳ ಅವರು ಕೋರಿರುತ್ತಾರೆ.

LOCAL EXPRESS : ಗುದ್ನೇಶ್ವರ ದೇವಸ್ಥಾನದ ಜಮೀನಿನಲ್ಲಿ ಆಡಳಿತ ಕಚೇರಿ ನಿರ್ಮಾಣಕ್ಕೆ ಗ್ರಾಮಸ್ಥರ ತೀವ್ರ ಪ್ರತಿರೋಧ..!

ಅದರಂತೆ ಗೌರಿ-ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಶಕ್ತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರ ಚಲಾಯಿಸಿ, 3ನೇ ದಿನದ ಗಣೇಶ ವಿಸರ್ಜನೆಯ ಪ್ರಯುಕ್ತ ಜಿಲ್ಲೆಯ ಯಲಬುರ್ಗಾ, ಬೇವೂರು ಹಾಗೂ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 20ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮದ್ಯೆ ಮಾರಾಟವನ್ನು ನಿಷೇಧಿಸಿದೆ. ಅದೇ ರೀತಿ 3ನೇ ಮತ್ತು 5ನೇ ದಿನದ ಗಣೇಶ ವಿಸರ್ಜನೆಯ ಪ್ರಯುಕ್ತ ಕೊಪ್ಪಳ ನಗರ, ಮುನಿರಾಬಾದ್, ಕೊಪ್ಪಳ ಗ್ರಾಮೀಣ, ಅಳವಂಡಿ, ಗಂಗಾವತಿ ನಗರ, ಗಂಗಾವತಿ ಗ್ರಾಮೀಣ, ಕನಕಗಿರಿ, ಕುಷ್ಟಗಿ, ತಾವರಗೇರಾ, ಹನಮಸಾಗರ ಮತ್ತು ಕಾರಟಗಿ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 21ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮತ್ತು ಸೆ. 23ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮದ್ಯೆ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

BIG BREAKING : ಖ್ಯಾತ ನಟನ ಪುತ್ರಿ ಆತ್ಮಹತ್ಯೆ..!!

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!