ಬೆಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ 50” “ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಉದ್ದೇಶಿಸಿದೆ.
BIG NEWS : ನಾಳೆ ಮದ್ಯ ಮಾರಾಟ ನಿಷೇಧ..!!
ಈ ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ.
LOCAL NEWS : ಇಟಗಿ ಆದರ್ಶ ವಿದ್ಯಾಲಯದ ಮಕ್ಕಳು ಯೋಗ ಹಾಗೂ ಚದುರಂಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ..!
ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ 25 ಸಾವಿರ ಬಹುಮಾನವನ್ನು ನಿಗದಿಪಡಿಸಲಾಗಿದೆ. ಲಾಂಛನ (ಲೋಗೋ)ದ ಮಾದರಿಯನ್ನು ಕಳುಹಿಸಲು ಇಂದಿನಿಂದ (ಸೆಪ್ಟೆಂಬರ್, 20) ರಿಂದ 30 ರವರೆಗೆ ಅವಕಾಶವಿದೆ. ಆಸಕ್ತರು ಈ ಬಗ್ಗೆ ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ #https://www.kannadasiri.karnataka.gov.in ದಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.