ಬೆಂಗಳೂರು : ಮಂಡ್ಯ ಸೇರಿದಂತೆ ದಕ್ಷಿಣ ಕರ್ನಾಟಕದ ಭಾಗದಲ್ಲಿ ಕಾವೇರಿ ಕಿಚ್ಚು ವ್ಯಾಪಕಗೊಳ್ಳುತ್ತಿದೆ. ಇಂದು ಮಂಡ್ಯ ಬಂದ್ ಗೂ ಕರೆ ನೀಡಲಾಗಿದೆ. ಈ ವೇಳೆಯಲ್ಲಿ ಇತ್ತ ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಬಿಜೆಪಿ, ಇಂದು ಬೃಹತ್ ಪ್ರತಿಭಟನೆಯನ್ನು ಬೆಂಗಳೂರಲ್ಲಿ ಹಮ್ಮಿಕೊಂಡಿದೆ.
NEWS ALERT : ಗಾಂಧಿ ಜಯಂತಿ ವಿಶೇಷ : “ಬಾಪೂಜಿ ಪ್ರಬಂಧ” ಸಲ್ಲಿಸಲು ಸೆ.25ರವರೆಗೆ ಅವಕಾಶ!
ರಾಜಧಾನಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಇರುವ ಕೆ.ಜಿ ರೋಡ್ ನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ “ಕಾವೇರಿ ಉಳಿಸಿ, ಕಾಂಗ್ರೆಸ್ ಮನೆಗೆ ಕಳುಹಿಸಿ” ಎಂಬ ಶೀರ್ಷಿಕೆ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ.
ನಾಡದ್ರೋಹಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ನಾಯಕರು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಇಂದು ಪ್ರತಿಭಟನೆಗೆ ಇಳಿಯಲಿದ್ದಾರೆ.
NEWS ALERT : ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ಅವರಿಂದ ಸೆಪ್ಟೆಂಬರ್ 25ಕ್ಕೆ “ಜನತಾ ದರ್ಶನ”!
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವರು, ಬಿಜೆಪಿಯ ಶಾಸಕರು ಸೇರಿದಂತೆ ನೂರಾರು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.