ಕುಕನೂರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಹಿಂದೂ ಮಹಾ ಮಂಡಳಿ ವತಿಯಿಂದ ಪ್ರತಿಷ್ಠಾಪನೆಗೊಂಡಿರುವ ಗಣಪತಿಯ ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ, ಮಹಿಳೆಯರಿಗಾಗಿಯೇ ಎಪಿಎಂಸಿ ಆವರಣದಲ್ಲಿ ಸಂಜೆ 5 ಗಂಟೆಯಿಂದ ಸುಮಾರು ಒಂದು ಗಂಟೆ ಕಾಲ ಡಿಜಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮಹಿಳೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕುಕನೂರು ಪಟ್ಟಣದ ಹಿಂದೂ ಮಹಾ ಮಂಡಳಿಯ ಸದಸ್ಯರು ಕೋರಿದ್ದಾರೆ.
ಮಹಿಳೆಯರು ಸಹಿತ ಡಿಜೆ ಯಂತಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂಬ ಬಯಕೆಯನ್ನು ಹೊಂದಿರುತ್ತಾರೆ. ಆದ್ದರಿಂದ ಅವರಿಗೂ ಸಹಿತ ಅವಕಾಶ ಕಲ್ಪಿಸಿ ಕೊಟ್ಟಿದ್ದೇವೆ ಎಂದು ಹಿಂದೂ ಮಹಾ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.