BIG NEWS : ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಜಿ. ಜಿ. ಗ್ರಾನೈಟ್ ಸ್ವಾಧೀನ ಪಡೆಸಿಕೊಳ್ಳಿ ಎಂದ ಕಾಂಗ್ರೆಸ್ ಕಾರ್ಯಕರ್ತರು..!!
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿ ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ. ಅದು ಇಂದು ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈಗಾಗಲೇ ಪೊಲೀಸರು ಬಂದೋಬಸ್ತ್ಗೆ ಕಾರ್ಯಕ್ಕೆ ಇಳಿದಿದ್ದಾರೆ. ಕರ್ನಾಟಕದಲ್ಲಿ ಖಾಕಿ ಪಡೆ ಸರ್ಪಗಾವಲಿನಲ್ಲಿದೆ.
BREAKING : ರಾಜ್ಯದಲ್ಲಿ ಮತ್ತೆ ಬಂದ್ ಶಾಕ್ : ನಾಳೆ ಕರ್ನಾಟಕ ಬಂದ್..!
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದ ಬಳಿ ಹೈ ಅಲರ್ಟ್ ಇದ್ದು, ಕೆಎಸ್ಆರ್ಪಿ ತುಕುಡಿ ನಿಯೋಜನೆ ಮಾಡಲಾಗಿದೆ. ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ದಾರಿಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಆಗಿದ್ದಾರೆ. ರಾಜದಾನಿಯ ಸಂಜಯ್ ನಗರ ಸರ್ಕಲ್, ಆನಂದ್ ರಾವ್ ಸರ್ಕಲ್, ಆರ್.ಟಿ ನಗರದ ತರಳುಬಾಳು ಜಂಕ್ಷನ್ ಸೇರಿದಂತೆ ಐದಾರು ಕಡೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.