ಬೆಳಗಾವಿ : “ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ತಗೆದುಕೊಳ್ಳಲಿದೆ. ಈ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ, ರಾಜ್ಯದಲ್ಲಿ ನಮ್ಮ ಪಕ್ಷ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ ಅಲ್ವಾ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಹೇಳಿದರು.