ಬೆಂಗಳೂರು : ಈ ಹಿಂದೆ ರಾಜ್ಯದಲ್ಲಿ ಕೋವಿಡ್ ತೀವ್ರತೆಯ ನಡುವೆಯೂ ಕಾಂಗ್ರೆಸ್ ನಾಯಕರು ಮೇಕೆದಾಟು ನದಿ ನೀರಿಗಾಗಿ ಪಾದಯಾತ್ರೆಯನ್ನು ನಡೆಸಿದ್ದರು. ಹೀಗೆ ಪಾದಯಾತ್ರೆ ನಡೆಸಿದ್ದಂತ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಕೇಸ್ ಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್ ನೀಡಿದಂತಾಗಿದೆ.
BIG NEWS : ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ..!!
ರಾಜ್ಯದಲ್ಲಿ ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧದ ಕೇಸ್ ದಾಖಲಾಗಿತ್ತು. ನಂತರ ಪ್ರಿಯಾಂಕ್ ಖರ್ಗೆ, ಬಿ.ಕೆ.ಹರಿಪ್ರಸಾದ್, ಈಶ್ವರ್ ಖಂಡ್ರೆ ವಿರುದ್ಧದ ಕೇಸ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
CRIME NEWS : ಕ್ಷುಲ್ಲಕ ಕಾರಣಕ್ಕೆ ಹೆಂಡ್ತಿಯ ಸಹೋದರಿಯ ಗಂಡನನ್ನು ಕತ್ತು ಕೊಯ್ಯುದು ಕೊಲೆ..!
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು, ಇಂದು ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ಬಿ.ಕೆ ಹರಿಪ್ರಸಾದ್ ವಿರುದ್ಧ ದಾಖಲಾಗಿದ್ದ ಕೋವಿಡ್ ನಿಯಮ ಉಲ್ಲಂಘನೆಯ ಕೇಸ್‌ಗಳನ್ನು ರದ್ದುಗೊಳಿಸಿದೆ.