ಎಷಿಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ನಂದಿನಿ, ಸಂಸದ ಕರಡಿ ಸಂಗಣ್ಣ ಅಭಿನಂದನೆ..
ಕೊಪ್ಪಳ : ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ ಬರುವ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದ ಕುಮಾರಿ ನಂದಿನಿ ಎಷಿಯನ್ ಗೇಮ್ಸ್ ನಲ್ಲಿ ಎಂಟು ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಕರ್ನಾಟಕ ರಾಜ್ಯ, ದೇಶಕ್ಕೆ ಕೀರ್ತಿ ತಂದಿದ್ದಾರೆ.
ಕುಮಾರಿ ನಂದಿನಿ ಅವರ ಸಾಧನೆಯನ್ನು ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ ಕರಡಿ ಅವರು ತಮ್ಮ fb ಖಾತೆಯಲ್ಲಿ ಹಂಚಿಕೊಂಡಿದ್ದು ನಂದಿನಿ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮವು ಸದ್ಯ ಕೊಪ್ಪಳ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತದೆ. ರಾರವಿ ಗ್ರಾಮದ ಕುಮಾರಿ ನಂದಿನಿ ಅವರು ಎಷಿಯನ್ ಗೇಮ್ಸ್ ನಲ್ಲಿ ಕಂಚು ಗೆದ್ದು ಜಿಲ್ಲೆ ಮತ್ತು ದೇಶದ ಕೀರ್ತಿ ಪತಾಕೆ ಹರಿಸಿದ್ದಾರೆ ಎಂದು ಸಂಸದ ಸಂಗಣ್ಣ ಅವರು ಅಭಿನಂದನೆ ತಿಳಿಸಿದ್ದಾರೆ.