ಸೋಮಶೇಖರ ಶಿವಾಚಾರ್ಯ ಸ್ವಾಮಿಗಳವರ ೩ನೇ ವರುಷದ ಪುಣ್ಯ ಸ್ಮರಣೋತ್ಸವ ಹಾಗೂ ಧರ್ಮ ಜಾಗೃತಿ ಸಭೆ
ನರೇಗಲ್ಲ :”ಮಾನವ ಜೀವನದ ಉನ್ನತಿಗೆ ಧರ್ಮಾಚರಣೆ ಅಗತ್ಯವಾಗಿದ್ದು, ಅರಿವು, ಆದರ್ಶಗಳಿಂದ ಮನುಷ್ಯನ ಬದುಕು ಸಮೃದ್ಧಗೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳು ದಾರಿ ದೀಪ” ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಅಬ್ಬಿಗೇರಿ ಹಿರೇಮಠದ ಶ್ರೀ ಜಗದ್ಗುರು ರೇಣುಕಾಚಾರ್ಯ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಲಿಂ.ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮಿಗಳವರ ೩ನೇ ವರುಷದ ಪುಣ್ಯ ಸ್ಮರಣೋತ್ಸವ ಹಾಗೂ ಧರ್ಮ ಜಾಗೃತಿ ಸಭೆಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಧರ್ಮ ಮುಖಿಯಾಗಿ ಮತ್ತು ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸಿದ್ದನ್ನು ಎಂದಿಗೂ ಮರೆಯಲಾಗದೆಂದ ಅವರು ಇದೇ ಅಕ್ಟೋಬರ್ ೧೫ ರಿಂದ ೨೪ರ ವರೆಗೆ ರಾಯಚೂರ ಜಿಲ್ಲೆ ಲಿಂಗಸುಗೂರಿನಲ್ಲಿ ಜರುಗುವ ಶ್ರೀ ರಂಭಾಪುರಿ ಜಗದ್ಗುರುಗಳ ೩೨ನೇ ವರ್ಷದ ದಸರಾ ಧರ್ಮ ಸಮಾರಂಭದಲ್ಲಿ ಎಲ್ಲ ಭಕ್ತರು ಭಾಗವಹಿಸಬೇಕೆಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಜಿ.ಎಸ್.ಪಾಟೀಲ ಮಾತನಾಡಿ ಲಿಂಗೈಕ್ಯ ಸೋಮಶೇಖರ ಶಿವಾಚಾರ್ಯರ ಶಿಷ್ಯ ವಾತ್ಸಲ್ಯ ಬಹು ದೊಡ್ಡದು. ಮನುಷ್ಯ ತುಳಿದು ಬದುಕುವುದಕ್ಕಿಂತ ತಿಳಿದು ಬದುಕುವುದು ಶ್ರೇಷ್ಠ. ಅವರ ಆದರ್ಶಗಳು ನಮ್ಮೆಲ್ಲರ ಬಾಳಿಗೆ ಬೆಳಕು ತೋರಲೆಂದ ಅವರು ೨೦೨೪ನೇ ಸಾಲಿನ ಶ್ರೀ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ಅಬ್ಬಿಗೇರಿಯಲ್ಲಿ ಅದ್ದೂರಿಯಾಗಿ ಆಚರಿಸುವ ಸಂಕಲ್ಪ ನಮ್ಮೆಲ್ಲರದು ಆಗಲೆಂದು ಆಶಿಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ ಅಬ್ಬಿಗೇರಿ ಹಿರೇಮಠ ಮತ್ತು ಸಿದ್ಧರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಅ,ಭಾ,ವೀ,ಶಿವಾಚಾರ್ಯ ಸಂಸ್ಥೆ ಅಧ್ಯಕ್ಷರಾದ ಮುಕ್ತಿ ಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿ ಮುನಿ ಶಿವಾಚಾರ್ಯರು ಮಾತನಾಡಿ ಸಂಪತ್ತು ಉಳ್ಳವನು ಶ್ರೀ ಮಂತನಲ್ಲ, ಸಂತಸ ಉಳ್ಳವನೇ ಶ್ರೀ ಮಂತ ದೇಹಶುದ್ದಿ ಭಾವ ಶುದ್ದಿ ಕಾರ್ಯ ಮಾಡಿದ ಸೋಮಶೇಖರ ಶಿವಾಚಾರ್ಯರು ನೆನಹು ಭಕ್ತರಿಗೆ ಸದಾ ಹಸಿರು ಎಂದರು.
ಲಿಂಗಕ್ಯ ಸೋಮಶೇಖರ ಶಿವಾಚಾರ್ಯರು ಪಲ್ಲಕ್ಕಿ ಉತ್ಸವ ಊರಿನ ಹಿರೇಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾದು ನೂತನ ಹಿರೇಮಠದವರೆಗೆ ವಾಧ್ಯ ವೈಭವ, ಅದ್ಧೂರಿಯಾಗಿ ಸಭ್ರಮದಿಂದ ಜರುಗಿತು.
ಈ ಸಂಧರ್ಭದಲ್ಲಿ ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ಚಳಗೇರಿ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯರು, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಯಲಬುರ್ಗ ಬಸವಲಿಂಗ ಶಿವಾಚಾರ್ಯರು, ಜಕ್ಕಲಿ ಹಿರೇಮಠದ ವಿಶ್ವಾರಾಧ್ಯ ಶಿವಾಚಾರ್ಯರು, ಸೂಡಿಯ ಜುಕ್ತಿ ಹಿರೇಮಠದ ಡಾ|| ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷ ನಿಲಪ್ಪ ದ್ವಾಸಲ,ಉಪಾಧ್ಯಕ್ಷೆ ರೇಣವ್ವ ಹಳ್ಳಿ,ಸುರೇಶ ನಾಯ್ಕರ, ರೇಖಾ ವಿರಾಪುರ ಹಾಗೂ ಇತರರಿದ್ದರು.
ವರದಿ: ಗವಿಸಿದ್ದಪ್ಪ ಗೊಡಚಪ್ಪನವರ