ಯಲಬುರ್ಗಾ : ಯಲಬುರ್ಗಾ ಪಟ್ಟಣದ ಹೊರವಲಯದಲ್ಲಿ ಗೂಡ್ಸ್ ಗಾಡಿಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಈ ಪರಿಣಾಮ ಅಪ್ಪೆ ಟಂಟಂ ಗೂಡ್ಸ್ ಗಾಡಿಯಲ್ಲಿ ಪ್ರಯಾಣಿಸುತ್ತಿದ್ದ 18 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಬೇವೂರು ಕಡೆಯಿಂದ ಯಲಬುರ್ಗಾ ಕಡೆ ಬರುತ್ತಿದ್ದ ಅಪೆ ಗೂಡ್ಸ್ ಗಾಡಿಗೆ, ಯಲಬುರ್ಗಾ ದಿಂದ ಬೇವೂರ್ ಕಡೆ ಹೋಗುತ್ತಿದ್ದ ಅಶೋಕ್ ಲೈಲ್ಯಾಂಡ್ ಗೂಡ್ಸ್ ಗಾಡಿ ನೇರವಾಗಿ ಡಿಕ್ಕಿ ಹೊಡೆದಿದೆ. ಅಪ್ಪೆ ಗೂಡ್ಸ್ ನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು 18 ಜನ ಮಹಿಳೆಯರು ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತು. ಸ್ಥಳಕ್ಕೆ ಯಲಬುರ್ಗಾ ಪೊಲೀಸ್ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದರು. ಬಳಿಕ ಎರಡು ಗೂಡ್ಸ್ ಗಾಡಿಗಳನ್ನು ಪೊಲೀಸ್ ವಶಪಡಿಸಿಕೊಂಡರು.