ಕುಕನೂರು : ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಕಪಾಳಮೊಕ್ಷ ಮಾಡಿದ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಲ್ಲಿ ಮರಿಸ್ವಾಮಿ ಎಂಬುವವರು ತಮ್ಮ ಆಸ್ತಿಗೆ ಸಂಬಂಧಿಸಿದ 9/11 ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. 9/11 ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಪಿಡಿಓ ಹನುಮಂತಪ್ಪ ನಾಯಕ ಇವರ ಮೇಲೆ ದೈಹಿಕ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದ್ದು,
ಇದೆ ದಿನ PDO ಅವರು ದಾಖಲೆ ಪರಿಶೀಲನೆ ಮಾಡಿ ಕೊಡುವುದಾಗಿ ಎಂದು ತಿಳಿಸಿದರು ಎನ್ನಲಾಗಿದೆ. “ಕರ್ತವ್ಯ ನಿರತ ನನ್ನ ಮೇಲೆ ಹಲ್ಲೆ ಮಾಡಿದ ಮರಿಸ್ವಾಮಿ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ” ಎಂದು ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಧಿಕಾರಿಗಳ ಮೇಲೆ ಹಲ್ಲೆ ಮಾಡಿರುವುದು ಸರಿಯಲ್ಲ ಏನೇ ಇದ್ದರು ಮಾತನಾಡಿ ಬಗೆಹರಿಕೊಳ್ಳಬಹುದಾಗಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಿಪಡಿಸಿದ್ದಾರೆ.