ತುಮಕೂರು : ರಾಜ್ಯದಲ್ಲಿ ಈಗಾಗಲೇ 5.25 ಲಕ್ಷ ಸರ್ಕಾರಿ ನೌಕರರು ಇದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಬ್ಲಾಕ್ ಲಾಗ್ ಉಳಿದಿವೆ. ಈ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ, ಮುಂದಿನ 5 ವರ್ಷಗಳಲ್ಲಿ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾದ “ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ”ಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ‘ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಅದರಂತೆ ಸರ್ಕಾರ ನಡೆದುಕೊಳ್ಳಲಿದ್ದು ಅದನ್ನು ಜಾರಿ ಮಾಡುತ್ತೇವೆ ಎಂದು ಹೇಳಿದರು.