ಇಂಗ್ಲೆಂಡ್ ವಿರುದ್ಧದ ಭಾರತ ವಿಶ್ವಕಪ್ ಪಂದ್ಯ ಇಂದು ಲಕ್ನೋದಲ್ಲಿ ನಡೆಯಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಟಾಸ್ ನಡೆದಿದ್ದು, ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಭಾರತ ಮೊದಲು ಬ್ಯಾಂಟಿಂಗ್ ಮಾಡಲಿದೆ. ಈ ಪಂದ್ಯವು ಸರಿಯಾಗಿ 2:00 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದಿಂದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ ಎಂದು ಕ್ರಿಕೆಟ್ ನೆಕ್ಸ್ಟ್ ವರದಿ ಮಾಡಿದೆ.
ಈ ಹಿಂದೆ ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಗಾಯಗೊಂಡಿದ್ದರು, ಅದಾದ ಬಳಿಕ ಸದ್ಯ ಅವರು ವಿಶ್ರಾಂತಿಯಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ.
ಭಾರತ (ಪ್ಲೇಯಿಂಗ್ XI):- ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ (ಪ್ಲೇಯಿಂಗ್ XI):- ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್