ವಿಜಯನಗರ : ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ-50ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಖತ್ ಸ್ಟೆಪ್ಸ್ ಹಾಕಿ ನೆರೆದಿದ್ದವರನ್ನು ರಂಜಿಸಿದರು.
ನಿನ್ನೆ ನಡೆದ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ವೇದಿಕೆ ಮೆಲೆ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದರು.
“ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿ ಮೈಮನ ಹಗುರಾಗಿಸಿತು. ಬಾಲ್ಯದಲ್ಲಿ ಕಲಿತ ವಿದ್ಯೆ ಬದುಕಿನುದ್ದಕ್ಕೂ ನೆನಪಿನಲ್ಲುಳಿಯುತ್ತಂತೆ.ಹೆಜ್ಜೆ ಹಾಕುತ್ತಾ ಹಾಕುತ್ತಾ ನನ್ನೂರ ಗೆಳೆಯರೊಡನೆ ಕುಣಿಯುತ್ತಿದ್ದ ಬಾಲ್ಯದ ದಿನಗಳು ನೆನಪಾದವು” ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.