ಕುಕನೂರು : ಕುಕನೂರಿನಲ್ಲಿ ಇಟರ್ನರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಉದ್ಛಾಟನಾ ಸಮಾರಂಭ ಇಂದು ಬೆಳಗ್ಗೆ 10 ಗಂಟೆಗೆ ಕುಕನೂರಿನ ಹಳೆಯ ತಾಲೂಕು ಪಂಚಾಯತ್ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾ.ಪ್ರಸನ್ನ ಬಿ. ವರಾಳೆ ಅವರು ಉದ್ಘಾಟಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಗೌರವಾನ್ವಿತ ನ್ಯಾ.ವಿ.ಶ್ರೀಶಾನಂದ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ನ್ಯಾ.ಹಂಚಾಟೆ ಸಂಜೀವಕುಮಾರ, ಸಚಿವರಾದ ಹೆಚ್.ಕೆ.ಪಾಟೀಲ, ಸತೀಶ ಜಾರಕಿಹೊಳಿ, ಶಿವರಾಜ ತಂಗಡಗಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ, ಶರಣಗೌಡ ಬಯ್ಯಾಪುರ, ಉಚ್ಚ ನ್ಯಾಯಾಲಯದ ರಿಜಿಸ್ಟçರ್ ಜನರಲ್ ಕೆ.ಎಸ್.ಭರತಕುಮಾರ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಚಂದ್ರಶೇಖರ ಸಿ., ಬಾರ್ ಅಸೋಸಿಯೇಶನ್ ಯಲಬುರ್ಗಾದ ಜನರಲ್ ಸೆಕ್ರೆಟರಿ ಈರಣ್ಣ ಕೊಳ್ಳೂರ, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಹೇಮಂತರಾಜ್ ಹಾಗೂ ಬಾರ್ ಅಸೋಸಿಯೇಶನ್ ಯಲಬುರ್ಗಾದ ಎಕ್ಸೆಕ್ಯೂಟಿವ್ ಕಮೀಟಿ ಮೆಂರ‍್ಸ್ ಹಾಗೂ ಇನ್ನೀತರರು ಉಪಸ್ಥತರಿರುವರು ಎಂದು ಪ್ರಕಟಣೆ ತಿಳಿಸಿದೆ.