2023ರ IPLನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಎರಡನೇಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಪಂದ್ಯ ರಾತ್ರಿ 7.30ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಪಂದ್ಯಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ವಿಶೇಷ ಸಂಚಾರಿ ಸೂಚನೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಂಚಾರಿ ಪೊಲೀಸರು ಸೂಕ್ತ ಸೌಲಭ್ಯಗಳನ್ನು ಕಲ್ಪಿಸಿದ್ದು, ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಸಂಚಾರ ವಿಭಾಗವು ಪಾರ್ಕಿಂಗ್ ಅನ್ನು ನಿರ್ಬಂಧಿಸಿದೆ.