ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಮನೆಗೆ ದೀಪಾಲಂಕಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿದ್ಯುತ್ ಕಂಬದಿಂದಲೇ ಸಂಪರ್ಕ ಪಡೆದಿದ್ದರು. ಈ ಮೂಲಕ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿದ್ದರು. ಈ ಸಂಬಂಧ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ, ಅದನ್ನು ಖಚಿತ ಪಡಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್ ಡಿಕೆಗೆ ಬರೋಬ್ಬರಿ 68 ಸಾವಿರ ದಂಡ ವಿಧಿಸಿದ್ದಾರೆ.
ಹೌದು, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಬೆಸ್ಕಾಂ ದಂಡ ವಿಧಿಸಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಮಾರಸ್ವಾಮಿ ಅವರು ಅಕ್ರಮವಾಗಿ ವಿದ್ಯುತ್ ಬಳಸಿಕೊಂಡಿದ್ದಾರೆ ಎಂದು ವಿಡಿಯೋ ಸಮೇತ ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ತೆರಳಿ ಪರಿಶೀಲನೆ ಮಾಡಿ, ಬಳಿಕ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿದ್ದರು.