ಬೆಂಗಳೂರು: ಹೈಕೋರ್ಟ್ ಆದೇಶದಂತೆ ವಾಹನಗಳು ರಾತ್ರಿ ವೇಳೆಯಲ್ಲಿ ಸಂಚರಿಸುವಾಗ ವಾಹನಗಳ “ಟೆಲ್ ಲ್ಯಾಂಪ್” ಇಂಡಿಕೇಟರ್‍ಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೂ ಸಹ, “Retro Reflective Tape and Rear marking plate”ಅನ್ನು ಕಡ್ಡಾವಾಗಿ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಇಂದು ತಿಳಿಸಿದ್ದಾರೆ.
ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕರ ಮತ್ತು ಮೋಟಾರು ವಾಹನ ಮಾಲೀಕರು / ಚಾಲಕರ ಹಿತದೃಷ್ಟಿಯಿಂದ ಸಾರಿಗೆ ವಾಹನಗಳಿಗೆ “Retro Reflective Tape and Rear marking plate” ಅಳವಡಿಕೆ ಮಾಡುವಂತೆ ಎಲ್ಲಾ ನೋಂದಣಿ ಪ್ರಾಧಿಕಾರಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.