ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
BREAKING : “ಕಲೆಕ್ಷನ್ ಕೊಡಿ, ನಿಗಮ ಮಂಡಳಿ ಅಧಿಕಾರ ಪಡಿ..!” ಸಿಎಂ ಸಿದ್ದರಾಮಯ್ಯ ಪೋಸ್ಟರ್ ಬಿಡುಗಡೆ!!
ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳನ್ನು ಹೊರ ರಾಜ್ಯಗಳಿಗೆ ಕರೆದೊಯ್ಯಲು ಜಿಲ್ಲಾ ಉಪನಿರ್ದೇಶಕರು ಇಲಾಖೆಯಿಂದ ಅನುಮತಿ ಕೇಳಿದ್ದರು. ಇದಕ್ಕೆ ಇಲಾಖೆಯು ರಾಜ್ಯ ಮಾತ್ರವಲ್ಲ, ದೇಶಾದ್ಯಂತ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಅದು ಅಲ್ಲದೆ, ಭಾರತೀಯ ರೈಲುಗಳಲ್ಲೂ ಪ್ರವಾಸ ಕೈಗೊಳ್ಳಬಹುದು. ಇದಕ್ಕೆ ಷರತ್ತುಗಳನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಮತಿ ನೀಡಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
BREAKING : ರಾತ್ರಿ ವೇಳೆಯಲ್ಲಿ ಸಂಚರಿಸುವ ವಾಹನಗಳು ಈ ನಿಯಮ ಕಡ್ಡಾಯವಾಗಿ ಪಾಲಿಸಬೇಕು..! : ಹೈಕೋರ್ಟ್ ಆದೇಶ !!