GOOD NEWS : ಹೊಸ ರೇಷನ್ ಕಾರ್ಡ್ ಗೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಾಹಿತಿ..!!

You are currently viewing GOOD NEWS : ಹೊಸ ರೇಷನ್ ಕಾರ್ಡ್ ಗೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಾಹಿತಿ..!!

ಬೆಂಗಳೂರು : ಹೊಸ ರೇಷನ್ ಕಾರ್ಡ್ ಗೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್, ಹೊಸ ಪಡಿತರ ಚೀಟಿ ಪಡೆಯಲು (Ration Card) ಅರ್ಜಿ ಸಲ್ಲಿಸೋ ಮುಂದಿನ ತಿಂಗಳು ಡಿಸೆಂಬರ್ 3 ರಂದು ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಉತ್ತಮ ಅವಕಾಶ ನೀಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಆಹಾರ ಇಲಾಖೆ, ಹೊಸ ಪಡಿತರ ಕಾರ್ಡ ಗೆ ಡಿಸೆಂಬರ್.3 ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದೆ. ಪಡಿತರ ಚೀಟಿ ತಿದ್ದುಪಡಿಗಾಗಿ ನ.29ರ ಇಂದು ಹಾಗೂ ನವೆಂಬರ್.30ರ ನಾಳೆ ಎರಡು ದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

EXCLUSIVE NEWS : ಕಾಲು ಜಾರಿ ಕೆರೆಗೆ ಬಿದ್ದ ಬಾಲಕ ಸಾವು : ಗ್ರಾಮ ಪಂಚಾಯತಿಯ ನಿರ್ಲಕ್ಷ್ಯದ ಆರೋಪ…!!

ಇನ್ನೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು. 6 ವರ್ಷದ ಒಳಗಿನ ಮಕ್ಕಳಿದ್ದರೇ ಜನನ ಪ್ರಮಾಣಪತ್ರವನ್ನು ಹೆಸರು ಸೇರ್ಪಡೆಗೆ ಬೇಕು. 6 ವರ್ಷ ಮೇಲ್ಪಟ್ಟವರಿಗೆ ಪ್ರಸಕ್ತ ಸಾಲಿನ ಜಾತಿ ಪ್ರಮಾಣಪತ್ರ ಅದು ಐದು ವರ್ಷಕ್ಕಿಂತ ಒಳಗೆ ಇರುವಂತ ದಾಖಲೆಗಳನ್ನು ನೀಡಬೇಕು ಎಂದು ಮಾಹಿತಿ ನೀಡಿದ್ದಾರೆ.

EXCLUSIVE NEWS : ಅಕ್ರಮ ಮರಳು ದಂಧೆ..! : ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಪರಿಶೀಲನೆ!!

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಳಿಗಾಗಿ ಡಿಸೆಂಬರ್.3ರಂದು ಅರ್ಜಿಯನ್ನು ‘ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್’ ಸೇವಾ ಕೇಂದ್ರಗಳಿಗೆ ತೆರಳಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.

Leave a Reply

error: Content is protected !!