ಕುಕನೂರ : ತಾಲೂಕಿನ ಕಕ್ಕಿಹಳ್ಳಿ ಗ್ರಾಮದಲ್ಲಿ ಕರ್ನಾಟಕ 50 ರ ಸಂಭ್ರಮಾಚರಣೆಯ ಪ್ರಯುಕ್ತ ನಾಡದೆವಿ ಕನ್ನಡಾಂಬೆ ರಥವನ್ನು ಶಾಲಾ ಮಕ್ಕಳಿಂದ ನಿನ್ನೆ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು.
ಈ ವೇಳೆಯಲ್ಲಿ ತಾಲೂಕ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಹೆಚ್ ಪ್ರಾಣೇಶ್ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಬಿರಾದಾರ್, ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ವೆಂಕಟೇಶ್ ವಂದಾಲ್ ರವರು ಹಾಜರಿದ್ದರು.
ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ ರವರು 2023-24 ನೇ ಸಾಲಿನ ಆಯವ್ಯಯದಲ್ಲಿ ಮೈಸೂರ ರಾಜ್ಯವು ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ಪೂರ್ಣಗೊಂಡಿರುವ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ – 50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನತೆಯಲ್ಲಿ ಕನ್ನಡ-ಕನ್ನಡಿಗ ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದರು. ಅದರಂತೆ ಕರ್ನಾಟಕ -50ರ ಸಂಭ್ರಮದ ಜ್ಯೋತಿ ರಥ ಯಾತ್ರೆಯು ಕುಕನೂರ ಬಳಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಚರಿಸಿ ಕನ್ನಡ ನಾಡು ನುಡಿಯ ಬಗ್ಗೆ ಪ್ರಚಾರ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಗೌರಮ್ಮ ಕುರ್ತುಕೋಟೆ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಮನ್ನಾಪುರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಗೌಡ, ಗ್ರಾಮ ಪಂಚಾಯತಿ ಸದಸ್ಯ ಯಮನೂರಪ್ಪ ಕಟ್ಟಿಮನಿ, ಕುಮಾರ್ ಹಾಗೂ ಮುಖಂಡರಾದ ಮೇಘರಾಜ್ ಬಳಗೇರಿ, ಸುರೇಶ್ ಬಳೂಟಗಿ, ಯಮನೂರಪ್ಪ ಭಾನಾಪೂರ, ಕುಮಾರ ಬಳಗೇರಿ, ವಿರುಪಾಕ್ಷಯ್ಯ ಕುರ್ತುಕೋಟಿ, ಶರಣಪ್ಪ ಚಹ್ಹಾಣ್, ಬಸವರಾಜ್ ನಾಯ್ಕ, ಹಂಪಣ್ಣ ಕಟ್ಟಿಮನಿ, ಪ್ರಕಾಶ್ ಬಳಗೆರಿ, ಮುಖ್ಯೋಪಾಧ್ಯಯ ಪ್ರಭುರಾಜ್ ಗುರಿಕಾರ್, ಅಂಗನವಾಡಿ ಕಾರ್ಯಾಕರ್ತೆ ತಿಪ್ಪಮ್ಮ ನಾಯ್ಕ, ಹಾಗೂ ಸ್ವ ಸಹಾಯ ಸಂಘದ ಸದಸ್ಯರು, ಶಾಲಾ ಶಿಕ್ಷಕರು, ವಿಧ್ಯಾರ್ಥಿಗಳು, ಗ್ರಾಮಸ್ಥರು, ಸಾರ್ವಜನಿಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಜೈಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು.