ಭಕ್ತ ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಹಾಗೂ ಬೀರಪ್ಪ ನಾಯಕ ಎಂಬ ದಂಪತಿಗಳ ಮಗನಾಗಿ ಜನ್ಮತಾಳಿದ್ದಾರೆ. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿ ಜನಾಂಗಗಳಿಗೆ ಬೇಕಾದವರಾಗಿದ್ದು, 15 – 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂತಲೂ ಹೇಳಲಾಗುತ್ತದೆ.