ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ 27,000 ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ 27,000 ಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶವಾಗಿದೆ.
ಅದು ಅಲ್ಲದೇ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಲಭ್ಯವಿರುವ Flipkart, Urban Company, Ola, Uber, Swiggy, Zomato, Amazon, Gig Worker ಹಾಗೂ Free-lancer (ಖಾಸಗಿ ಕ್ಷೇತ್ರ) ತರಬೇತಿ ನೀಡುವ ಬಗ್ಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನ ತರಬೇತಿಗೆ SC-ST ಅಭ್ಯರ್ಥಿಗಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು www.sw.kar.nic.in ಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ತಿಳಿಸಿದೆ.