ಬೆಂಗಳೂರು : 2023-24ನೇ ಸಾಲಿನಲ್ಲಿ ಸುಮಾರು 4,000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
BREAKING : ಕರ್ತವ್ಯನಿರತ KSRTC ಬಸ್ ನಿರ್ವಾಹಾಕ ಕಂ ಚಾಲಕ ಹೃದಯಾಘಾತದಿಂದ ಸಾವು!!
ಸಿಎಂ ಅವರು, ರವಿವಾರ (ಡಿ. 03) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ “ವಿಶ್ವ ವಿಕಲಚೇತನರ ದಿನಾಚರಣೆ 2023” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
LOCAL NEWS : ವಕೀಲರ ಮೇಲೆ ಪೊಲೀಸರಿಂದ ದೌರ್ಜನ್ಯ ಪ್ರಕರಣ : ತೀವ್ರವಾಗಿ ಖಂಡಿಸಿದ ವಕೀಲರು..!
2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಕಲಚೇತನರಿದ್ದಾರೆ. ವಿಕಲಚೇತನರು ಸಮಾಜಕ್ಕೆ ಹೊರೆ ಅಲ್ಲ ಎಂಬ ಸಂದೇಶ ಕೊಡುವ ಮೂಲಕ ಅವರೂ ಕೂಡ ಬೇರೆಯವರಂತೆ ಈ ಸಮಾಜದಲ್ಲಿ ಎಲ್ಲ ಅವಕಾಶಗಳನ್ನು ಪಡೆದು ಉದ್ಯೋಗ, ಬದುಕಿಗೆ ಹಕ್ಕುಗಳನ್ನು ಪಡೆದಿದ್ದಾರೆ. ವಿಕಲಚೇತನರಿಗೆ ಶಿಕ್ಷಣ, ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು.