ಹುಲಿಗೆಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ.
ಕೊಪ್ಪಳ : ಸಾರಿಗೆ ಮತ್ತು ಮುಜುರಾಯಿ ಖಾತೆ ಸಚಿವ ಎಂ ರಾಮಲಿಂಗಾ ರೆಡ್ಡಿ ಇಂದು ಸುಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು.
LOCAL BIG BREAKING : ರಸ್ತೆ ಅಪಘಾತ : ಬೈಕ್ ಸವಾರ ಸಾವು..!, ಈ ಸಾವಿಗೆ ಕಾರಣ ಯಾರು..?
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ದೇವಸ್ಥಾನದಲ್ಲಿ ಮೂಲಭೂತ ಸೌಕರ್ಯಗಳು ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸುವ ಸಮಗ್ರ ಅಭಿವೃದ್ಧಿಯ ಯೋಜನೆ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹುಲಿಗಿಯು ಜಿಲ್ಲೆಯ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾಗಿದ್ದು ಲಕ್ಷಾಂತರ ಭಕ್ತರು ಹುಲಿಗೆಮ್ಮ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆ ದೇವಸ್ಥಾನದ ಸಮಗ್ರ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಹೇಳಿರುವುದಾಗಿ ಸಚಿವರು ತಿಳಿಸಿದರು.
ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪ್ರಾಧಿಕಾರ ಮಾಡಿದಂತೆ ಇಲ್ಲಿಯೂ ಕೂಡಾ ಹುಲಿಗಿ ಮತ್ತು ಅಂಜನಾದ್ರಿ ಅಭಿವೃದ್ಧಿ ಪ್ರಧಿಕಾರ ರಚನೆ ಮಾಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಈ ಸಂದರ್ಭದಲ್ಲಿ ಗಂಗಾವತಿ ಶಾಸಕ ಜನಾರ್ಧನ್ ರೆಡ್ಡಿ, ಮುಜುರಾಯಿ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಕೊಪ್ಪಳ ತಹಸೀಲ್ದಾರ್ ವಿಠಲ್ ಚೌಗಲೇ, ದೇವಸ್ಥಾನದ ಅರ್ಚಕರು, ಪುರೋಹಿತರು, ದೇವಸ್ಥಾನ ಆಡಳಿತಾಧಿಕಾರಿಗಳು ಇದ್ದರು.