ಬೆಂಗಳೂರು : ವಿಶ್ವಾದ್ಯಂತ ಕೊರೊನಾ ಮತ್ತೆ ಹೆಚ್ಚಾಗುತ್ತಿದೆ. ದೇಶದಲ್ಲೂ ದಾಪುಗಾಲು ಇಡುತ್ತಿದೆ ಎಂಬ ಮಾಹಿತಿ ಇದೆ. ಹಾಗಾಗಿ “ರಾಜ್ಯದಲ್ಲಿ ಕೊವಿಡ್ -19 ವೈರಾಣು ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅದು ಅಲ್ಲದೇ ಮುನ್ನೆಚ್ಚರಿಕೆಯ ಮೂಲಕ ಕೊರೋನಾವನ್ನು ಹಿಮ್ಮೆಟ್ಟಿಸೋಣ” ಎಂದು ಕೂಡ ಕರೆ ನೀಡಿದ್ದಾರೆ.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 GOOD NEWS : ಯಲಬುರ್ಗಾ ಹಾಗು ಕುಕನೂರು ತಾಲೂಕಿನ ಜನತೆಗೆ ಶಾಸಕ ರಾಯರಡ್ಡಿ ಸಿಹಿ ಸುದ್ದಿ..!
ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ, “ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ” ಎಂದು ಮನವಿ ಮಾಡಿದ್ದಾರೆ.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 IPL 2024 : 24.75 ಕೋಟಿ….ನಿಮಿಷಗಳಲ್ಲೇ ಕಮಿನ್ಸ್ ದಾಖಲೆ ಮುರಿದ ಸ್ಟಾರ್ಕ್..!!
ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ
1. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರು ಮನೆಯಿಂದ ಹೊರಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ.
2. ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.
3. ವೈಯಕ್ತಿಕ ಸ್ವಚ್ಥತೆಯ ಕಡೆಗೆ ಹೆಚ್ಚು ಗಮನ ನೀಡಿ.
4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಜನಸಂದಣಿ ಪ್ರದೇಶದಿಂದ ದೂರವಿರಿ.
5. ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ. ಮಾಸ್ಕ್ ಕಡ್ಡಾಯವಾಗಿ ಧರಿಸಿ.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 Political Round : ಟಿಕೆಟ್ ಪಕ್ಕಾ ಮಾಡಿಕೊಳ್ಳಲು ದೆಹಲಿಗೆ ಹೋದ್ರಾ ಸಂಸದ ಸಂಗಣ್ಣ ಕರಡಿ ?
ಈ ಮೇಲ್ಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯದ ಜನರು ತಪ್ಪದೇ ಪಾಲಿಸಿ. ಕೋವಿಡ್19ನಿಂದ ಕರ್ನಾಟಕವನ್ನು ದೂರವಿರಿಸಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.