BEAKING : ರಾಯರಡ್ಡಿಗೆ ಒಲಿದು ಬಂತು ಸಚಿವ ಸಂಪುಟ ದರ್ಜೆಯ ಸ್ಥಾನಮಾನ!

You are currently viewing BEAKING : ರಾಯರಡ್ಡಿಗೆ ಒಲಿದು ಬಂತು ಸಚಿವ ಸಂಪುಟ ದರ್ಜೆಯ ಸ್ಥಾನಮಾನ!

ಬೆಂಗಳೂರು : ಕಾಂಗ್ರೆಸ್‌ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಬಸವರಾಜ್ ರಾಯರಡ್ಡಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಕೊನೆಗೂ ಒಲಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ನೀಡಿದ್ದಾರೆ. ಬಸವರಾಜ ರಾಯರಡ್ಡಿ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿ ಸಾಕಷ್ಟು ಅನುಭವ ಇದೆ. ಶಾಸಕ ಬಸವರಾಜ ರಾಯರಡ್ಡಿಯವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದ್ದು, ಅವರ ಕಾರ್ಯಕರ್ತರಲ್ಲಿ ಹಾಗೂ ಅಭಿಮಾನಿಗಳಲ್ಲಿ ಸಂತೋಷವನ್ನು ಉಂಟು ಮಾಡಿದೆ

Leave a Reply

error: Content is protected !!