BREAKING : “ಶಕ್ತಿ ಯೋಜನೆ”ಗೆ 6 ತಿಂಗಳುಗಳಲ್ಲಿ ಖರ್ಚಾದ ಹಣ ಎಷ್ಟು ಗೊತ್ತಾ?, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

You are currently viewing BREAKING : “ಶಕ್ತಿ ಯೋಜನೆ”ಗೆ 6 ತಿಂಗಳುಗಳಲ್ಲಿ ಖರ್ಚಾದ ಹಣ ಎಷ್ಟು ಗೊತ್ತಾ?, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಂದು ಈಗಾಗಲೇ ಆರು ತಿಂಗಳು ಕಳೆದಿದ್ದು, ಸರ್ಕಾರ ತಾನು ಹೇಳಿದ್ದ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಐದರಲ್ಲಿ “ಶಕ್ತಿ ಯೋಜನೆ” ಕೂಡ ಒಂದಾಗಿಗದೆ. ಈ ಯೋಜನೆ ಜಾರಿಯಾಗಿ 6 ತಿಂಗಳುಗಳಷ್ಟೇ ಪೂರೈಸಿದೆ.

ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ….👉  BIG NEWS : “ಆರ್ಥಿಕ ಸಲಹೆಗಾರ” ಮಹತ್ವದ ಜವಾಬ್ದಾರಿ, ಈ ಹುದ್ದೆಯ ವೇತನ ಮುಟ್ಟಲ್ಲ : ಶಾಸಕ ರಾಯರೆಡ್ಡಿ..!

ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಎಕ್ಸ್‌ ನಲ್ಲಿ ಸಂಪೂರ್ಣ ಮಾಹಿತಿ ಬಿಚ್ಚಿಟ್ಟಿದ್ದು, ‘”ಶಕ್ತಿ ಯೋಜನೆ”ಗೆ 6 ತಿಂಗಳುಗಳಷ್ಟೇ ಪೂರೈಸಿದರೂ, ಸಾಧನೆ ಬೆಟ್ಟದಷ್ಟಿದೆ. ಶಿಕ್ಷಣ, ಉದ್ಯೋಗ, ದೇವರ ದರ್ಶನ ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು 126 ಕೋಟಿಗೂ ಅಧಿಕ ಉಚಿತ ಟಿಕೇಟ್ ಪಡೆದು ಪ್ರಯಾಣ ಬೆಳೆಸಿದ್ದು, ಈ ವರೆಗಿನ ಒಟ್ಟು ಟಿಕೇಟ್ ಮೌಲ್ಯ ರೂ. 3,000 ಕೋಟಿ ದಾಟಿದೆ ಎಂದು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ….👉  BIG BREAKING : ಬಿಜೆಪಿ ನಾಯಕರಲ್ಲಿ ವಿನಂತಿ ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ..!!, ಯಾಕೆ ಗೊತ್ತ?

‘ಮಹಿಳಾ ಸಬಲೀಕರಣದ ಈ ಯೋಜನೆಗೆ ಹೆಣ್ಣುಮಕ್ಕಳಿಂದ ವ್ಯಕ್ತವಾಗುತ್ತಿರುವ ಅಭೂತಪೂರ್ವ ಸ್ಪಂದನೆ ಕಂಡು ಖುಷಿಯಾಗುತ್ತಿದೆ. ಯೋಜನೆಯಿಂದ ಲಾಭ ಪಡೆದು ಮತ್ತಷ್ಟು ಹೆಣ್ಣುಮಕ್ಕಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

error: Content is protected !!