ಕೊಪ್ಪಳ ಜಿಲ್ಲೆಯ ಬಿಜೆಪಿ ಘಟಕದ ಭೀಷ್ಮ ಎಂದೆನಿಸಿಕೊಂಡಿರುವ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಈಶಣ್ಣ ಗುಳಗಣ್ಣನವರ್ ರವರ ಪುತ್ರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಗುಳಗಣ್ಣನವರು ಇದೀಗ ಕೊಪ್ಪಳ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ನವೀನ್ ಗುಳುಗಣ್ಣನವರ್ ರನ್ನು ರಾಜ್ಯ ಬಿಜೆಪಿ ಘಟಕದ ಬಿ ವೈ ವಿಜಯೇಂದ್ರರವರು ನೇಮಕ ಮಾಡಿ ಆದೇಶ ನೀಡಿದ್ದಾರೆ. ಇದು ಈಗ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ನವೀನ್ ಗುಳಗಣ್ಣನವರ್ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ.