ಉಡುಪಿ: ಜಿಲ್ಲೆಯಲ್ಲಿ ಕುಂದಾಪರುದ ವಾಜಪೇಯಿ ಎಂದೇ ಪ್ರಖ್ಯಾತಗೊಂಡಿದ್ದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಇಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ‘ಪ್ರಸ್ತುತ ರಾಜಕೀಯದಲ್ಲಿ ಸ್ಪರ್ಧಿಸದೇ ಇರೋದಕ್ಕೆ ನಿರ್ಧರಿಸಿದ್ದೇನೆ. ನಾಲ್ಕು ಬಾರಿ ಕುಂದಾಪರದಿಂದ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ನಾನು ಬಿಜೆಪಿ ಪಕ್ಷಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಚಿರಋಣಿಯಾಗಿದ್ದೇನೆ ಎಂದು ತಿಳಿಸಿದರು.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ರಾಜಕೀಯ ನಿವೃತ್ತಿಯನ್ನು ಹೊಂದಲಿದ್ದೇನೆ ಎಂದು ಹೇಳಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕುಂದಾಪುರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದವರು. ಹಾಗಾಗಿ ಬಿಜೆಪಿಯಿಂದ ಯುವಕರಿಗೆ ಮನ್ನಣೆ ಸಿಗಲಿ. ಕಿರಣ್ ಕೊಡ್ಗಿ ಅವರಿಗೆ ಟಿಕೆಟ್ ನೀಡಲಿ ಎನ್ನುವ ಸಲುವಾಗಿ, ಅವರಿಗೆ ಬೆಂಬಲಿಸಿ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.