ಕೊಪ್ಪಳ : ಕಲ್ಯಾಣ ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರವಾದ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ ಹರಿದು ಬಂದಿದ್ದು, ನೋಡುವುದಕ್ಕೆ ಎರಡು ಕಣ್ಣುಗಳು ಸಾಲದು. ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿದೆ. ಲಕ್ಷಾಂತರ ಭಕ್ತ ಸಾಗರ ನಡುವೆ ಸಾಗಿ ಬಂದ ಗವಿಶ್ರೀ ಮಠದ ಮಹಾ ಇಂದು ಸಂಜೆ 5:30ಕ್ಕೆ ರಥೋತ್ಸವವು ಅದ್ದೂರಿಯಾಗಿ ಜರುಗಿತು.
ಬರೋಬ್ಬರಿ ತಿಂಗಳ ಕಾಲ ನಿರಂತರ ನಡೆಯುವ ಶ್ರೀಮಠದ ಆವರಣದಲ್ಲಿ ಗವಿಸಿದ್ದೇಶ್ವರ ಜಾತ್ರೆಗೆ ಧ್ವಜಾರೋಹಣ ಮೂಲಕ ಸುತ್ತೂರು ಶ್ರೀಗಳಿಂದ ಚಾಲನೆ ನೀಡಲಾಗಿದ್ದು, ಪಲ್ಲಕ್ಕಿಯಲ್ಲಿ ಗವಿಸಿದ್ದೇಶ್ವರ ಮೂರ್ತಿ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಜಾತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹಾಗೂ ಪ್ರಮುಖರು ಭಾಗಿಯಾಗಿದ್ದರು.