ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು “ಕೇಂದ್ರ ಬಜೆಟ್ 2024-25” ಅನ್ನು ಮಂಡಿಸುತ್ತಿದ್ದಾರೆ. ಈ ಬಾರಿಯ ಲೋಕಸಭೆಯನ್ನು ತಲೆಯಲ್ಲಿ ಇಟ್ಟುಕೊಂಡು ಇಂದು ಬಜೆಟ್ ಮಂಡನೆ ಮಾಡಲಾಗಿದೆ ಎಂದು ರಾಜಕೀಯ ಅಭಿಪ್ರಾಯಗಳು ಬರುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಅದೇ “ಆಯುಷ್ಮಾನ್ ಆರೋಗ್ಯ ಯೋಜನೆ”ಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸಿ ಎಂದು ಅವರು ತಮ್ಮ ಬಜೆಟ್ ಭಾಷಣೆ ಹೇಳಿದರು.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂದು ಹೇಳಿದರು.