ಬೆಂಗಳೂರು : ಮಾಜಿ ಸಿಎಂ ಹಾಗೂ ಬಣಜಿಗ ಸಮಾಜದ ಪ್ರಬಲ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಇದೀಗ ಶಾಸಕ ಲಕ್ಷ್ಮಣ ಸವದಿ ಪಕ್ಷ ಬಿಡದಂತೆ ಕೈನಾಯಕರು ಎಚ್ಚರಿಕೆ ವಹಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ.
ಗಾಣಿಗ ಸಮಾಜದ ಪ್ರಬಲ ನಾಯಕ ಶಾಸಕ ಲಕ್ಷ್ಮಣ ಸವದಿ ಜೊತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಿರಂತರ ಸಂಪರ್ಕ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಪಕ್ಷ ಬಿಡಬೇಡಿ ಎಂದು ಸೌದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಎಲ್ಲಾ ಬೆಳವಣಿಗೆಗಳ ನಡುವೆ ಸವದಿಗೆ ಕರೆ ಮಾಡಿ ಸುರ್ಜೆವಲ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಸೂಕ್ತ ಸ್ಥಾನಮಾನ ನೀಡುವುದಾಗಿ ಲಕ್ಷ್ಮಣ ಸವದಿಗೆ ಸುರ್ಜೆವಾಲ ಭರವಸೆ ನೀಡಿದ್ದಾರೆ.
ಮುಂಬರುವ ವಾರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರಜೆವಾಲ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೆ ವೇಳೆ ಕೆಲ ಬೇಡಿಕೆ ಇಡಲು ಸವದಿ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದಿದ್ದು ಕೈ ನಾಯಕರು ಇದೀಗ ಬಹಳ ಎಚ್ಚರಿಕೆ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.