ಕೊಪ್ಪಳ : ಕೊಪ್ಪಳ ಜಿಲ್ಲೆಯ ಜನರ ಬಹುನಿರೀಕ್ಷೆಯ ಕನಕಗಿರಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಿಳಿಸಿದಂತೆ ಇದೀಗ ದಿನಾಂಕ ನಿಗದಿಪಡಿಸಿ ಜಿಲ್ಲೆಯ ಜನರ ಸಂಭ್ರಮ ಹೆಚ್ಚಿಸಿದ್ದಾರೆ.
ಕನಕಗಿರಿ ಉತ್ಸವ ನಡೆಸುವ ಸಂಬಂದ ಕನಕಗಿರಿಯ ಕನಕಾಚಲಪತಿ ದೇವಸ್ಥಾನದಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಚಿವರಾದ ಶಿವರಾಜ ತಂಗಡಗಿ ಅವರು ಫೆ.3ರಂದು ಪೂರ್ವಭಾವಿ ಸಭೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉತ್ಸವ ಆಚರಣೆಗೆ 2.5 ಕೋಟಿ ರೂ. ಅನುದಾನವನ್ನು ಈಗಾಗಲೇ ಮಂಜೂರಿ ಮಾಡಲಾಗಿದೆ. ಉತ್ಸವ ನಡೆಸುವ ಬಗ್ಗೆ ಅಭಿಪ್ರಾಯ ಪಡೆಯಲಾಗಿದೆ. ಮಾರ್ಚ 2 ಮತ್ತು 3 ರಂದು ಉತ್ಸವ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅದೇ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ, ಕವಿಗೋಷ್ಠಿ, ಸ್ತಬ್ಧ ಚಿತ್ರ, ಕುಸ್ತಿ ಪಂದ್ಯಾವಳಿ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆ, ಮನರಂಜನೆ ಕಾರ್ಯಕ್ರಮ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜಿಸಿದ್ದೇವೆ ಎಂದು ತಿಳಿಸಿದರು.