ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ನಿಧನ,
ಸಿ. ಎಂ. ಸಿದ್ದರಾಮಯ್ಯ ಸಂತಾಪ.!!
ಕೊಪ್ಪಳ : ಯಾದಗಿರಿ ಜಿಲ್ಲೆಯ ಸುರುಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ (67) ಇಂದು ಭಾನುವಾರ ಅನಾರೋಗ್ಯದಿಂದ ಬೆಂಗಳೂರು ಆಸ್ಪತ್ರೆಯಲ್ಲಿ ನಿಧಾನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರೀಯಾಗದೆ ಇಂದು ಕೊನೆಯುಸಿರು ಎಳೆದಿದ್ದಾರೆ.
ಇತ್ತೀಚಿಗಷ್ಟೇ ಶಾಸಕರು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ನಿಧಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.