ನವದೆಹಲಿ : 2024ರ ಲೋಕಸಭಾ ಚುನಾವಣೆಯ ದಿನಾಂಕ ಇಂದು ಹೊರಬೀಳಲಿದೆ. ಇದೀಗ ಪತ್ರಿಕಾಗೋಷ್ಠಿ ನಡೆಯುತ್ತಿದ್ದು, ಈ ಮೂಲಕ ಚುನಾವಣಾ ಆಯೋಗ ದಿನಾಂಕಗಳನ್ನು ಪ್ರಕಟಿಸಲಿದೆ. ಲೋಕಸಭಾ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಸಹ ಘೋಷಿಸಲಾಗುವುದು.
ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ.