ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 1200 ಪಾರ್ಕ್ ಗಳು ಇನ್ನು ಮುಂದೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.
ಇನ್ನು ಇದೇ ವೇಳೆ ನಗರ ವ್ಯಾಪ್ತಿಯಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್ ಗಳನ್ನು ತೆರವು ಮಾಡದಿರುವುದಕ್ಕೆ ಸಹಾಯಕ ಕಂದಾಯ ಅಧಿಕಾರಿ ವಿರುದ್ಧ ಕೇಸು ದಾಖಲಿಸುವಂತೆ ಈ ವೇಳೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದರು.
ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ಶ್ರೀ ಉಮಾಶಂಕರ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಪ್ರೀತಿ ಗೆಹ್ಲೋಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.