ಟಿ20 ವಿಶ್ವಕಪ್ 2024ರ ಸೂಪರ್ 8 ಸುತ್ತಿನಲ್ಲಿ ಇಂದು ಭಾರತ, ಅಫ್ಘಾನಿಸ್ತಾನ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯಕ್ಕೆ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಾಸ್ ಗೆದ್ದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದೀಗ ಪ್ರಸ್ತುತ ಸ್ಕೋರ್ 8.3 ಓವರ್‌ನಲ್ಲಿ ಪ್ರಮುಖ 3 ವಿಕೇಟ್ ಗೆ 62 ರನ್ ಗಳಿಸಿದೆ. ಅದರಂತೆ ಉಭಯ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗದಲ್ಲಿ ತಲಾ ಒಂದೊಂದು ಬದಲಾವಣೆಗಳನ್ನು ಮಾಡಿವೆ. ಇನ್ನು ಲೀಗ್ನಲ್ಲಿ ಭಾರತದ ಪ್ರದರ್ಶನದ ಬಗ್ಗೆ ಹೇಳುವುದಾದರೆ,, ರೋಹಿತ್ ಪಡೆ ಒಂದೇ ಒಂದು ಪಂದ್ಯದಲ್ಲಿ ಸೋಲು ಕಂಡಿಲ್ಲ. ಇದಲ್ಲದೇ ಟಿ20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತದ ದಾಖಲೆಯೂ ಅತ್ಯುತ್ತಮವಾಗಿದೆ. ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಇದುವರೆಗೆ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳನ್ನು ಆಡಿದ್ದು, ಎಲ್ಲಾ ಮೂರು ಪಂದ್ಯಗಳನ್ನು ಗೆದ್ದಿದೆ.