ಬೆಂಗಳೂರು : ಕನ್ನಡ ಚಲನಚಿತ್ರಕ್ಕೆ ಇಂದು ಮಹತ್ವದ ದಿನವಾಗಿದ್ದು, ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಹಚರರು ಹಾಗೂ ಯುವರಾಜ್ ಕುಮಾರ್-ಶ್ರೀದೇವಿ ದಾಂಪತ್ಯ ಕಲಹದ ಬಗ್ಗೆ ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಇಬ್ಬರು ನಟರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಲಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಇಂದು ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.
ಮತ್ತೊಂದಡೆ ರಾಜ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಛೇದನ ಕೊಡಲು ಮುಂದಾಗಿದ್ದಾರೆ. ಯುವ ರಾಜ್ ಕುಮಾರ್ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಕ್ರೌರ್ಯ, ಅಗೌರವದಿಂದ ನೋಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು, ಈ ಕುರಿತು ಇಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.