Ration Card : ‘ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಸಿಹಿಸುದ್ದಿ..!!

You are currently viewing Ration Card : ‘ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಸಿಹಿಸುದ್ದಿ..!!

ಪ್ರಜಾ ವೀಕ್ಷಣೆ ಸುದ್ದಿಜಾಲ:-

ಬೆಂಗಳೂರು : ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದು, ಆದರೆ, ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಕುರಿತು ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಇದೆ. ಸೆಪ್ಟೆಂಬರ್.30ರವರೆಗೆ ಪಡಿತರ ಚೀಟಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡೋದಕ್ಕೆ ಗಡುವನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದೇ ಜೂನ್.30ರವರೆಗೆ ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಅನೇಕ ಪಡಿತರ ಚೀಟಿದಾರರ ಕುಟುಂಬಸ್ಥರು ಆಧಾರ್ ಸಂಖ್ಯೆ ಲಿಂಕ್ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ಈಗ ರಾಜ್ಯ ಸರ್ಕಾರ ಮತ್ತೊಮ್ಮೆ ಸೆಪ್ಟೆಂಬರ್.30ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಿದೆ.

Leave a Reply

error: Content is protected !!